13/08/2026
ಮಾಜಿ ಸಚಿವ ನಾಗೇಂದ್ರ ಪುನರ್ ಸೇರ್ಪಡೆ ಮಾಡಿದ್ದಕ್ಕೆ ಬಿಜೆಪಿ ವಿರೋಧ; Roopali Naik
ಕಾರವಾರ: ಬಹುಕೋಟಿ ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಗುರುವಾರ ಮಾತನಾಡಿ, "186 ಕೋಟಿ ರೂಪಾಯಿ ಹಗರಣದ ತನಿಖೆ ಕೋರ್ಟ್ ಹಾಗೂ ಇಡಿಯಲ್ಲಿ ನಡೆಯುತ್ತಿರುವಾಗಲೇ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಅಕ್ಷಮ್ಯ. ಕಾಂಗ್ರೆಸ್ ಸರ್ಕಾರ ಯಾರ ಹಿತಕ್ಕಾಗಿ ಈ ರೀತಿ ಮಾಡುತ್ತಿದೆ?" ಎಂದು ಪ್ರಶ್ನಿಸಿದ್ದಾರೆ.
ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಧಿವೇಶನದಲ್ಲಿ ಕಲಾಪದ ಬಾವಿಗಿಳಿದು ಹೋರಾಟ ನಡೆಸಲಿದ್ದು, ಕಾರವಾರ ಜಿಲ್ಲೆಯಲ್ಲೂ ಡಿಸಿ ಕಚೇರಿ ಮುಂಭಾಗ ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.